ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿನೀಡಿ ಧರ್ಮಾಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಸಹಸ್ರ ಚಂಡಿಕಾಯಾಗದ ಪ್ರಸಾದವನ್ನು ನೀಡಿ ಶ್ರೀಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಕುರಿತು ಮಾಹಿತಿಯನ್ನು ನೀಡಲಾಯಿತು. ಅಗಲ್ಪಾಡಿ ಕ್ಷೇತ್ರಕ್ಕೆ ಪೂರ್ಣ ಸಹಕಾರವನ್ನು ನೀಡುವುದಾಗಿ ಪೂಜ್ಯ ಹೆಗ್ಗಡೆಯವರು ತಿಳಿಸಿದರು.
ಅಗಲ್ಪಾಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜಿ. ಶರ್ಮಾ ಕೋಳಿಕ್ಕಜೆ, ಪದ್ಮಶ್ರೀ ಗಿರೀಶ್ ಭಾರದ್ವಾಜ್, ಶ್ರೀ ದುರ್ಗಾಪರಮೇಶ್ವರಿ ಸೇವಾಸಂಘದ ಅಧ್ಯಕ್ಷ ರಾಜೇಶ್ ಮಜಕ್ಕಾರು, ರಾಜೇಶ್ ಮಾಸ್ತರ್ ಅಗಲ್ಪಾಡಿ ಉಪಸ್ಥಿತರಿದ್ದರು.

.jpg)
