ಕಾಸರಗೋಡು : ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯ ಕಾಸರಗೋಡಿನ ಕ್ಯಾಂಪಸ್ ಅಭಿವೃದ್ಧಿ ಸಮಿತಿಯ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿಶ್ವ ವಿದ್ಯಾಲಯದ ಆವರಣದಲ್ಲಿ ವಿವೇಕಾನಂದ ವೃತ್ತಕ್ಕೆ ಸಂಚರಿಸುವ ರಸ್ತೆಯ ಎರಡೂ ಬದಿ ತೆಂಗಿನ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರಭಾರ ಉಪಕುಲಪತಿ ಪೆÇ್ರ. ಜೋಸೆಫ್ ಕೋಯಿಪಲ್ಲಿ ಸಮಾರಂಭ ಉದ್ಘಾಟಿಸಿದರು. ರಿಜಿಸ್ಟ್ರಾರ್ ಡಾ. ಎಂ. ಮುರಳೀಧರನ್ ನಂಬಿಯಾರ್, ಪರೀಕ್ಷಾ ನಿಯಂತ್ರಕ ಡಾ. ಆರ್. ಜಯಪ್ರಕಾಶ್, ಕ್ಯಾಂಪಸ್ ಅಭಿವೃದ್ಧಿ ಅಧಿಕಾರಿ ಡಾ. ಟೋನಿ ಗ್ರೇಸ್, ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪರಿಸರ ದಿನಾಚರಣೆ ಅಂಗವಾಗಿ ಎನ್ನೆಸ್ಸೆಸ್ ಸೆಲ್ ವತಿಯಿಂದ ಪರಿಸರ ವಿಜ್ಞಾನ ವಿಭಾಗದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

