HEALTH TIPS

ಸಿಕ್ಕಿಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ತಮಾಂಗ್

              ಗ್ಯಾಂಗ್ಟಾಕ್: ಸಿಕ್ಕಿಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ಅಧ್ಯಕ್ಷ ಪ್ರೇಮ್ ಸಿಂಗ್ ತಮಾಂಗ್ ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

          ಇಲ್ಲಿನ ಪಾಲ್ಜೋರ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಪ್ರಮಾಣ ವಚನ ಬೋಧಿಸಿದರು.

             ಸಮಾರಂಭದಲ್ಲಿ ಭಾಗವಹಿಸಿದ್ದ ಪಕ್ಷದ 30 ಸಾವಿರಕ್ಕೂ ಅಧಿಕ ಕಾರ್ಯಕರ್ತರು ತಮಾಂಗ್‌ ಪರ ಘೋಷಣೆ ಕೂಗಿದರು.

           ಸಿಕ್ಕಿಂ ರಾಜ್ಯದಲ್ಲಿ ಪಟಾಕಿ ಸಿಡಿಸುವುದಕ್ಕೆ ನಿಷೇಧವಿದ್ದರೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.

             ಮುಖ್ಯಮಂತ್ರಿ ಜೊತೆ ಸೋನಂ ಲಾಮಾ, ಅರುಣ್‌ ಕುಮಾರ್‌ ಉಪ್ರೇಟಿ, ಸಮದುಪ್‌ ಲೆಪ್ಚಾ, ಭೀಮ್‌ ಹಂಗ್ ಲಿಂಬೂ, ಭೋಜರಾಜ ರಾಯ್‌, ಜಿ.ಟಿ.ಧುನ್ಗೆಲ್‌, ಪುರನ್‌ ಕುಮಾರ್‌ ಗುರುಂಗ್‌, ಪಿಂಟ್ಸೊ ನಮಗ್ಯಾಲ್‌ ಲೆಪ್ಚಾ, ನರ್ ಬಹಾದ್ದೂರ್‌ ದಹಲ್‌, ರಾಜು ಬಸ್ನೇಟ್‌, ಟಿರ್ಸಿಂಗ್‌ ತೆಂಡುಪ್‌ ಭುಟಿಯಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

            ಹಿಂದಿನ ಸಂಪುಟದಲ್ಲಿದ್ದ ನಾಲ್ವರು ಸಚಿವರನ್ನು ಮಾತ್ರ ಈ ಸಂಪುಟದಲ್ಲಿ ಮತ್ತೆ ಸೇರಿಸಿಕೊಳ್ಳಲಾಗಿದೆ. ಮುಖ್ಯಮಂತ್ರಿ ಪತ್ನಿ ಕೃಷ್ಣ ಕುಮಾರಿ ರಾಯ್‌ ಸೇರಿದಂತೆ ನಾಲ್ವರು ಮಹಿಳೆಯರು ಎಸ್‌ಕೆಎಂನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries