HEALTH TIPS

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಅಧಿಕಾರ ವಹಿಸಿಕೊಂಡ ಅನ್ನಪೂರ್ಣ ದೇವಿ

          ವದೆಹಲಿ: ಅನ್ನಪೂರ್ಣ ದೇವಿ ಅವರು ಇಂದು (ಮಂಗಳವಾರ) ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

           ಅಧಿಕಾರ ವಹಿಸಿಕೊಳ್ಳುವ ಮುನ್ನ, 55 ವರ್ಷದ ದೇವಿ ಅವರು ಮಾಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.


               ಈ ಕುರಿತು 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ಸ್ಮೃತಿ ಇರಾನಿ ಅವರನ್ನು ಅವರ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾರ್ಗದರ್ಶನ ಪಡೆದಿದ್ದೇನೆ. ಸ್ಮೃತಿ ಅವರು ನೀಡಿದ ಪ್ರೀತಿಯ ಸ್ವಾಗತ ಆತ್ಮೀಯವಾಗಿತ್ತು. ಅವರ ಸ್ಫೂರ್ತಿದಾಯಕ ಮಾರ್ಗದರ್ಶನವು ನನಗೆ ಬೆಳಕಿನ ಕಿರಣದಂತೆ ಯಾವಾಗಲೂ ಉಪಯುಕ್ತವಾಗಿರುತ್ತದೆ' ಎಂದು ಬರೆದುಕೊಂಡಿದ್ದಾರೆ.

         ಪ್ರಧಾನಿ ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಕನಸನ್ನು ನನಸಾಗಿಸಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.

            ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ರಾಜ್ಯ ಸಚಿವೆಯಾಗಿ ಸಾವಿತ್ರಿ ಠಾಕೂರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮುನ್ನ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸಿದ್ದಾರೆ.

            ಸ್ಮೃತಿ ಇರಾನಿ ಅವರು ಹಿಂದಿನ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದರು. ಅವರು ಈ ಸಲ ಸೋತಿದ್ದಾರೆ. ಈ ಬಾರಿ ಈ ಖಾತೆಯನ್ನು ಅನ್ನಪೂರ್ಣ ದೇವಿ ಅವರಿಗೆ ಕೊಡಲಾಗಿದೆ.

             ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾರದ ನೂತನ ಸಚಿವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗಿತ್ತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries