ಕೋಝಿಕ್ಕೋಡ್: ತಳಿಪರಂಬದ ಪ್ರಸಿದ್ಧ ಶ್ರೀರಾಜರಾಜೇಶ್ವರಿ ದೇವಸ್ಥಾನವನ್ನು ವಿವಾದಕ್ಕೆ ಎಳೆದಿದ್ದಕ್ಕಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕರ್ನಾಟಕ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಕೊಚ್ಚಿಯ ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಗೋವಿಂದನ್ ನಂಬೂದಿರಿ ಎಂಬವರು ದೂರು ನೀಡಿದ್ದಾರೆ. ಶಿವಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
ಡಿ.ಕೆ. ಶಿವಕುಮಾರ್ ದೇವಸ್ಥಾನದ ಮುಖ್ಯ ದೇವರನ್ನು ತಪ್ಪಾಗಿ ಉಲ್ಲೇಖಿಸಿದ್ದಾರೆ. ಹೀಗಾಗಿ, ಪ್ರಸಿದ್ಧ ಶ್ರೀರಾಜರಾಜೇಶ್ವರಿ ದೇವಸ್ಥಾನವನ್ನು ಅನಗತ್ಯವಾಗಿ ವಿವಾದಕ್ಕೆ ಎಳೆÉದರು. ಈ ಬಗ್ಗೆ ಕರ್ನಾಟಕದ ಉಪಮುಖ್ಯಮಂತ್ರಿ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.





