ಮಂಜೇಶ್ವರ: ವಾಚನ ಪಕ್ಷಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನೆ ಇಂದು(ಜೂ. 19) ಬೆಳಗ್ಗೆ 10 ಕ್ಕೆ ಕುಂಬಳೆ ಜಿ.ಎಸ್.ಬಿ.ಎಸ್. ಶಾಲೆಯಲ್ಲಿ ನಡೆಯಲಿದೆ. ಗ್ರಂಥಾಲಯ ಕೌನ್ಸಿಲ್ ನ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ವಿ.ಕೆ. ಪನಯಾಲ್ ಉದ್ಘಾಟಿಸುವರು. ಜಿಲ್ಲಾ ಗ್ರಂಥಾಲಯ ಕೌನ್ಸಿಲ್ ಅಧ್ಯಕ್ಷ ಕೆ.ವಿ. ಕುಞÂ್ಞ ರಾಮನ್ ಅಧ್ಯಕ್ಷತೆ ವಹಿಸುವರು. ವಿವಿಧ ವಲಯಗಳ ಗಣ್ಯರು ಉಪಸ್ಥಿತರಿರುವರು. ವಾಚನ ಪಕ್ಷಾಚಾರಣೆಯ ಅವಧಿಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳನ್ನು ಓದುವಿಕೆಯಲ್ಲಿ ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಗ್ರಂಥಾಲಯ ಕೌನ್ಸಿಲ್ ಪ್ರಕಟಣೆಯಲ್ಲಿ ತಿಳಿಸಿದೆ.

.jpeg)
