ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕುಂಜತ್ತೂರು ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಮಾದಕದ್ರವ್ಯ ವಿರುದ್ಧ ಪ್ರತಿಜ್ಞೆ ಕೈಗೊಂಡರು. ನಂತರ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತೂಮಿನಾಡು ವರೆಗೆ ಶಾಲಾ ವಿದ್ಯಾರ್ಥಿಗಳು ಮಾದಕದ್ರವ್ಯ ವಿರುದ್ಧ ಘೋಷಣೆಯೊಂದಿಗೆ ಮೆರವಣಿಗೆ ನಡೆಸಿದರು. ಸ್ಟೂಡೆಂಟ್ ಪೊಲೀಸ್ ಕ್ಯಾಡೆಟ್(ಎಸ್‍ಪಿಸಿ)ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.





