ನವದೆಹಲಿ: 'ಇಂಡಿಯಾ' ಮೈತ್ರಿಕೂಟ ಪಕ್ಷಗಳ ಸಭೆಯು ದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಆರಂಭವಾಗಿದೆ.
0
samarasasudhi
ಜೂನ್ 01, 2024
ನವದೆಹಲಿ: 'ಇಂಡಿಯಾ' ಮೈತ್ರಿಕೂಟ ಪಕ್ಷಗಳ ಸಭೆಯು ದೆಹಲಿಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಆರಂಭವಾಗಿದೆ.
'ನನ್ನ ತಾಯಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವುದರಿಂದ ಸಭೆಗೆ ಹಾಜರಾಗಲು ಸಾಧ್ಯವಿಲ್ಲ' ಎಂದು ಮೆಹಬೂಬಾ ಮುಫ್ತಿ 'ಪಿಟಿಐ'ಗೆ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಇಂದು ಅಂತಿಮ ಹಂತದ ಮತದಾನ ಮುಕ್ತಾಯವಾಗಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದ್ದು, ಅದಕ್ಕೂ ಮೊದಲು ಮೈತ್ರಿಕೂಟದ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ಸಭೆ ಆಯೋಜಿಸಲಾಗಿದೆ.
ಜನರು ಬದಲಾವಣೆ ಬಯಸುತ್ತಿದ್ದಾರೆ. ಇಂಡಿಯಾ ಮೈತ್ರಕೂಟ ಅಧಿಕಾರಕ್ಕೆ ಬರುತ್ತದೆ ಎನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತಲ ಹೇಳಿದ್ದಾರೆ.