ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.
0
samarasasudhi
ಜೂನ್ 10, 2024
ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.
'ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಿ 24 ಗಂಟೆ ಕಳೆಯುವುದರೊಳಗೆ, ಬಿಜೆಪಿಯ ಗಣ್ಯ ಹಾಗೂ ಐಟಿ ವಿಭಾಗದ ಮುಖ್ಯಸ್ಥರ ವಿರುದ್ಧ ಗಂಭೀರವಾದ ಆರೋಪ ಕೇಳಿಬಂದಿದೆ. ಪಕ್ಷದ ಪ್ರಭಾವಿ ಸ್ಥಾನದಲ್ಲಿರುವ ಮಾಳವೀಯ ಅವರನ್ನು ಕೂಡಲೇ ಕಿತ್ತುಹಾಕಬೇಕೆಂದು ಒತ್ತಾಯಿಸುತ್ತೇವೆ' ಎಂದು ಅವರು ಆಗ್ರಹಿಸಿದ್ದಾರೆ.
ಮಾಳವೀಯ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಯಬೇಕು ಎಂದೂ ಸುಪ್ರಿಯಾ ಒತ್ತಾಯಿಸಿದ್ದಾರೆ.
ಮಾಳವೀಯ ಅವರು ಪಶ್ಚಿಮ ಬಂಗಾಳದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಿನ್ಹಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.