ನವದೆಹಲಿ: 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
0
samarasasudhi
ಜೂನ್ 24, 2024
ನವದೆಹಲಿ: 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಅಗಲಿದ ಗಣ್ಯರ ಗೌರವಾರ್ಥ ಮೌನ ಆಚರಿಸುವುದರ ಮೂಲಕ ಕಲಾಪ ಆರಂಭವಾಗಲಿದೆ. ಮೊದಲಿಗೆ ಲೋಕಸಭೆಯ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮಹತಾಬ್ ಅವರು ಕರೆ ನೀಡಲಿದ್ದಾರೆ. ಆ ನಂತರ ಎರಡು ದಿನಗಳವರೆಗೆ ಉಳಿದ ಸದಸ್ಯರ ಪ್ರಮಾಣವಚನ ಪ್ರಕ್ರಿಯೆ ನಡೆಯಲಿದೆ.
ಜೂನ್ 26ರಂದು ಲೋಕಸಭಾ ಸ್ಪೀಕರ್ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.