HEALTH TIPS

ಅಗಲ್ಪಾಡಿ ಪಾಂಚಜನ್ಯ ಸಾರ್ವಜನಿಕ ಗ್ರಂಥಾಲಯದ ಪ್ರಥಮ ವಾರ್ಷಿಕೋತ್ಸವ

             ಬದಿಯಡ್ಕ: ಅಗಲ್ಪಾಡಿ ಜಯನಗರ ಪಾಂಚಜನ್ಯ ಸಾರ್ವಜನಿಕ ಗ್ರಂಥಾಲಯದ ಪ್ರಥಮ ವಾರ್ಷಿಕೋತ್ಸವ ಹಾಗೂ ವಾಚನಾ ಸಪ್ತಾಹದ ಸಮಾರೋಪ ಸಮಾರಂಭ  ಜರಗಿತು. ನಿವೃತ್ತ ಪ್ರಾಚಾರ್ಯ ಪ್ರೊ.ಎ. ಶ್ರೀನಾಥ್ ಕೊಲ್ಲಂಗಾನ ಅಧ್ಯಕ್ಷತೆ ವಹಿಸಿದ್ದರು. ಕುಂಬ್ಡಾಜೆ ಗ್ರಾಮಪಂಚಾಯಿತಿ ಸದಸ್ಯ ಹರೀಶ್ ಗೋಸಾಡ, ನಿವೃತ್ತ ಪ್ರಾಂಶುಪಾಲ ಡಾ.ಬೇ.ಸೀ.ಗೋಪಾಲಕೃಷ್ಣ ಭಟ್, ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ, ನಿವೃತ್ತ ಚಿತ್ರಕಲಾ ಅಧ್ಯಾಪಕ ಬಾಲಸುಬ್ರಹ್ಮಣ್ಯ ಭಟ್ ಮಧುರಕಾನನ, ಧಾರ್ಮಿಕ ಮುಂದಾಳು ಹರಿನಾರಾಯಣ ಶಿರಂತಡ್ಕ, ವಿಹಿಂಪ ಕುಂಬ್ಡಾಜೆ ಪಂಚಾಯಿತಿ ಸಮಿತಿ ಸತ್ಸಂಗ ಪ್ರಮುಖರಾದ ಜನಾರ್ದನ ಮಣಿಯಾಣಿ ಬೆದ್ರುಕೂಡ್ಲು ಉಪಸ್ಥಿತರಿದ್ದರು. 


          ಪಾಂಚಜನ್ಯ ಸಾರ್ವಜನಿಕ ಗ್ರಂಥಾಲಯದ ಅಧ್ಯಕ್ಷ ಅಚ್ಚುತ ಮಾಸ್ತರ್ ಅಗಲ್ಪಾಡಿ ಸ್ವಾಗತಿಸಿ, ಶ್ರೀ ಗೋಪಾಲಕೃಷ್ಣ ಭಜನ ಮಂದಿರದ ಅಧ್ಯಕ್ಷ ಬಾಬು ಮಾಸ್ತರ್ ಅಗಲ್ಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗ್ರಂಥಾಲಯದ ಸಂಚಾಲಕ ರಾಜೇಶ್ ಮಾಸ್ತರ್ ಅಗಲ್ಪಾಡಿ ವಂದಿಸಿದರು, ಸಂಚಾಲಕ ರಮೇಶ್ ಕೃಷ್ಣ ಪದ್ಮಾರು ನಿರೂಪಿಸಿದರು. ವಾಚನವಾರದ ಅಂಗವಾಗಿ ನಡೆದ ರಸಪ್ರಶ್ನೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಶ್ರೀಧರ ಪದ್ಮಾರ್, ಗಿರೀಶ್ ಪಿ ಕೆ ಅಗಲ್ಪಾಡಿ, ರಮ್ಯಾ ರಂಜಿತ್ ಅಗಲ್ಪಾಡಿ ಸಹಕರಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries