HEALTH TIPS

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆ

             ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ತಮ್ಮ 21 ನೇ ಚಾತುರ್ಮಾಸ್ಯ ವ್ರತಸಂಕಲ್ಪವನ್ನು ಜು.21 ಗುರುಪೂರ್ಣಿಮೆಯಂದು ಕೊಂಡೆವೂರು ಮಠದಲ್ಲಿ ಕೈಗೊಳ್ಳಲಿದ್ದಾರೆ. ಆ ದಿನ ಬೆಳಿಗ್ಗೆ 9. ಕ್ಕೆ ಗಣಹೋಮ, ಶ್ರೀನಿತ್ಯಾನಂದ ಗುರುದೇವರಿಗೆ ಪಂಚಾಮೃತಾಭೀಷೇಕ, ಸೀಯಾಳಾಭೀಷೇಕ, 10.30 ಕ್ಕೆ ವ್ಯಾಸಪೂಜೆ ಆರಂಭವಾಗಿ 12.ಕ್ಕೆ ಮಂಗಳಾರತಿ, 12.30 ಕ್ಕೆ ಮಹಾಪೂಜೆಯ ಬಳಿಕ ಅನ್ನಪ್ರಸಾದ ನಡೆಯಲಿದೆ. ಸಂಜೆ 7 ಕ್ಕೆ "ಶ್ರೀ ಗುರುಪಾದುಕಾ ಪೂಜೆ", ಭಜನೆ ನಂತರ ಪರಮಪೂಜ್ಯರು ಸತ್ಸಂಗ ನಡೆಸಿ ಅನುಗ್ರಹ ಮಂತ್ರಾಕ್ಷತೆ ನೀಡಲಿದ್ದಾರೆ.

        ಸೆ.18. ಕ್ಕೆ ಸಂಪನ್ನಗೊಳ್ಳಲಿರುವ ಚಾತುರ್ಮಾಸ್ಯದ ಈ ಸತ್ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರತಿದಿನ ಸಂಜೆ 5.30 ರಿಂದ 7 ರವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾಸೇವೆ ನಡೆಯಲಿದ್ದು, ಪ್ರತೀ ಭಾನುವಾರ ವಿದ್ವಾಂಸರಿಂದ ಪ್ರವಚನ, ಯಕ್ಷಗಾನ ತಾಳಮದ್ದಳೆ, ಭರತನಾಟ್ಯ ಮುಂತಾದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಭಕ್ತಾದಿಗಳು ಶ್ರೀ ಮಠಕ್ಕೆ ಆಗಮಿಸಿ ಶ್ರೀ ಗಾಯತ್ರೀ ಮಾತೆಯ ಹಾಗೂ ನಿತ್ಯಾನಂದ ಭಗವಾನರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಕೊಂಡೆವೂರು ಮಠದ ಪ್ರಕಟನೆಯಲ್ಲಿ ತಿಳಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries