ಅಡಿಸ್ ಅಬಾಬಾ: ಇಥಿಯೋಪಿಯಾದಲ್ಲಿ ಭಾರಿ ವರ್ಷಧಾರೆಯಿಂದ ಉಂಟಾದ ಮಣ್ಣು ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 229ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಜುಲೈ 25, 2024
ಅಡಿಸ್ ಅಬಾಬಾ: ಇಥಿಯೋಪಿಯಾದಲ್ಲಿ ಭಾರಿ ವರ್ಷಧಾರೆಯಿಂದ ಉಂಟಾದ ಮಣ್ಣು ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 229ಕ್ಕೆ ಏರಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
'ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ತಡೆ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ. ಎಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಲೆಕ್ಕ ಇನ್ನೂ ಸಿಕ್ಕಿಲ್ಲ.
'ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಕೆಲವರು ನಾಪತ್ತೆಯಾಗಿದ್ದಾರೆ. ಮಣ್ಣನ್ನು ತೆಗೆಯುವ ಸಂದರ್ಭದಲ್ಲಿ, ಕೆಳಗೆ ಸಿಲುಕಿದವರು ರೋದಿಸುವುದು ಕೇಳಿಬರುತ್ತಿದೆ' ಎಂದು ಗೋಫಾ ವಲಯದ ವಿಪತ್ತು ನಿರ್ವಹಣೆ ಸಂಸ್ಥೆಯ ಮಾರ್ಕೋಸ್ ಮೆಲೆಸ್ ತಿಳಿಸಿದ್ದಾರೆ.
ದಕ್ಷಿಣ ಇಥಿಯೋಪಿಯಾದ ಕೆಂಚೊ ಶಾಚಾ ಗೊಜ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಮಣ್ಣು ಕುಸಿತದಲ್ಲಿ ಮಕ್ಕಳು, ಗರ್ಭಿಣಿಯರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಐವರನ್ನು ರಕ್ಷಿಸಲಾಗಿದೆ ಎಂದು ಸ್ಥಳೀಯ ಆಡಳಿತಾಧಿಕಾರಿ ಡಗ್ಮಾವಿ ಅಯೆಲೆ ತಿಳಿಸಿದ್ದಾರೆ.