ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ಪ್ರಮುಖ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಐದು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
0
samarasasudhi
ಜುಲೈ 01, 2024
ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ಪ್ರಮುಖ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಐದು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
ದೆಹಲಿಯ ಈಗಿನ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರು 23 ವರ್ಷಗಳ ಹಿಂದೆ ಮೇಧಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಪ್ರಕರಣದಲ್ಲಿ ಸಕ್ಸೇನಾ ಅವರ ಘನತೆಗೆ ಧಕ್ಕೆ ತಂದಿರುವ ಕಾರಣ ಅವರಿಗೆ ₹10 ಲಕ್ಷ ಪರಿಹಾರವನ್ನೂ ನೀಡುವಂತೆ ಮೇಧಾ ಅವರಿಗೆ ಕೋರ್ಟ್ ನಿರ್ದೇಶಿಸಿದೆ.
ಇದೇ ವೇಳೆ ಆದೇಶವನ್ನು 30 ದಿನಗಳ ಕಾಲ ಅಮಾನತಿನಲ್ಲಿರಿಸಿದ್ದು, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ ಎಂದು ಬಾರ್ ಆಯಂಡ್ ಬೆಂಚ್ ವರದಿ ಮಾಡಿದೆ.
ಮೇಧಾ ಅವರ ವಯಸ್ಸು ಮತ್ತು ಆರೋಗ್ಯ ಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಒಂದು ಅಥವಾ ಎರಡು ವರ್ಷಗಳಂತಹ ದೀರ್ಘ ಅವಧಿಯ ಶಿಕ್ಷೆಯನ್ನು ನೀಡಲಾಗುತ್ತಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.