ಜಮ್ಮು: ಪವಿತ್ರ ಹಿಮಲಿಂಗ ಅಮರನಾಥ ಮಂದಿರಕ್ಕೆ 3,471 ಯಾತ್ರಿಗಳನ್ನು ಒಳಗೊಂಡ 23ನೇ ತಂಡವು ಇಂದು ಮುಂಜಾನೆ ಪ್ರಯಾಣ ಬೆಳೆಸಿತು.
0
samarasasudhi
ಜುಲೈ 20, 2024
ಜಮ್ಮು: ಪವಿತ್ರ ಹಿಮಲಿಂಗ ಅಮರನಾಥ ಮಂದಿರಕ್ಕೆ 3,471 ಯಾತ್ರಿಗಳನ್ನು ಒಳಗೊಂಡ 23ನೇ ತಂಡವು ಇಂದು ಮುಂಜಾನೆ ಪ್ರಯಾಣ ಬೆಳೆಸಿತು.
2,398 ಯಾತ್ರಿಕರು ಸಾಂಪ್ರದಾಯಿಕ 48 ಕಿ.ಮೀ. ಉದ್ದದ ಪಹಲ್ಗಾಮ್ ಮಾರ್ಗದಲ್ಲಿ ತೆರಳಿದರೆ, 1,073 ಯಾತ್ರಿಕರು 14 ಕಿ.ಮೀ. ಕಡಿದಾದ ಬಾಲ್ಟಾಲ್ ಮಾರ್ಗವನ್ನು ಆಯ್ದುಕೊಂಡಿದ್ದಾರೆ.
ಜೂನ್ 29ರಂದು ಅಮರನಾಥ ಯಾತ್ರೆ ಆರಂಭಗೊಂಡಿದ್ದು, ಇಲ್ಲಿಯವರೆಗೆ 3.75 ಲಕ್ಷ ಮಂದಿ ಯಾತ್ರೆ ಬೆಳೆಸಿದ್ದಾರೆ. ಆಗಸ್ಟ್ 19ರಂದು ಯಾತ್ರೆ ಮುಕ್ತಾಯಗೊಳ್ಳಲಿದೆ.
3,880 ಮೀಟರ್ ಎತ್ತರದ ಪವಿತ್ರ ಗುಹೆ ದೇಗುಲಕ್ಕೆ ಕಳೆದ ವರ್ಷ 4.5 ಲಕ್ಷ ಭಕ್ತರು ಭೇಟಿ ನೀಡಿ ಶಿವನ ದರ್ಶನ ಪಡೆದಿದ್ದರು.