ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭಾರಿ ಮಳೆ ಹಾಗೂ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 84ಕ್ಕೂ ಅಧಿಕ ಎಂದು ತಿಳಿದು ಬಂದಿದೆ. ಇನ್ನೊಂದೆಡೆ ಕೇರಳದಲ್ಲಿ ಸಂಭವಿಸಿದ ಈ ದುರಂತಕ್ಕೆ ನೆರೆಯ ಕರ್ನಾಟಕ ಈಗಾಗಲೇ ನೆರವಿನ ಹಸ್ತ ಚಾಚಿದೆ.
0
samarasasudhi
ಜುಲೈ 30, 2024
ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭಾರಿ ಮಳೆ ಹಾಗೂ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 84ಕ್ಕೂ ಅಧಿಕ ಎಂದು ತಿಳಿದು ಬಂದಿದೆ. ಇನ್ನೊಂದೆಡೆ ಕೇರಳದಲ್ಲಿ ಸಂಭವಿಸಿದ ಈ ದುರಂತಕ್ಕೆ ನೆರೆಯ ಕರ್ನಾಟಕ ಈಗಾಗಲೇ ನೆರವಿನ ಹಸ್ತ ಚಾಚಿದೆ.
ಇನ್ನೊಂದಡೆ ಈ ಕುರಿತು ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಕೇರಳದ ಜೊತೆ ನಾವೂ ಇದ್ದೇವೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಇಂದು ಬೆಳಿಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿರುವ ಸ್ಟಾಲಿನ್, ಘಟನಾ ಸ್ಥಳಕ್ಕೆ ನಮ್ಮ ರಾಜ್ಯದಿಂದ ತುರ್ತು ರಕ್ಷಣಾ ಪಡೆಯನ್ನು ಕಳುಹಿಸಿ ಕೊಡಲಾಗುವುದು ಅಲ್ಲದೇ ಅಗತ್ಯ ಸಹಕಾರನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಅಲ್ಲದೇ ಮೆಪ್ಪಾಡಿ ದುರಂತದ ತಕ್ಷಣದ ಪರಿಹಾರ ಕಾರ್ಯಾಚರಣೆಗೆ ₹5 ಕೋಟಿ ಬಿಡುಗಡೆ ಮಾಡಲು ಸಂಬಂಧಿಸಿದ ಅಧಿಕಾರಿಗೆ ಸ್ಟಾಲಿನ್ ಅವರು ಸೂಚಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ತಮಿಳುನಾಡು ಕಳುಹಿಸಿರುವ ತಂಡದಲ್ಲಿ ಅಗ್ನಿಶಾಮಕ ದಳದ ಹಾಗೂ ತುರ್ತು ರಕ್ಷಣಾ ಪಡೆಯ ತಲಾ 20 ಸಿಬ್ಬಂದಿ ಇದ್ದಾರೆ. ಜೊತೆಗೆ ವೈದ್ಯರು, ನರ್ಸ್‌ಗಳು ಇದ್ದಾರೆ ಎಂದು ತಿಳಿಸಿದೆ.
ನದಿ ಮತ್ತು ಮಣ್ಣಿನಡಿಯಿಂದ ಮೃತದೇಹಗಳನ್ನು ಹೊರ ತೆಗೆಯುವುದು ರಕ್ಷಣಾ ಕಾರ್ಯಕರ್ತರಿಗೆ ಸವಾಲಿನ ಕೆಲಸವಾಗಿದ್ದು, ಸತ್ತವರ ಸಂಖ್ಯೆಯನ್ನು ನಿಖರವಾಗಿ ಹೇಳಲಾಗುತ್ತಿಲ್ಲ ಎಂದು ತಿಳಿಸಿದೆ.
ಘಟನೆಯಲ್ಲಿ ಗಾಯಗೊಂಡ 70 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಕೇರಳ ಕಂದಾಯ ಸಚಿವ ಕೆ. ರಾಜನ್ ಹೇಳಿದ್ದಾರೆ. ಇತ್ತ, ಬೆಂಗಳೂರಿನಿಂದ 30 ಸದಸ್ಯರ ಎನ್‌ಡಿಆರ್‌ಎಫ್ ತಂಡವು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ತೆರಳಿದೆ.