ನವದೆಹಲಿ: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಗೆ ಸಂಬಂಧಿಸಿದಂತೆ ಐಟಿ ಸಚಿವಾಲಯವು ಟೆಕ್ ದೈತ್ಯ ಮೈಕ್ರೋಸಾಫ್ಟ್‌ನೊಂದಿಗೆ ಸಂಪರ್ಕದಲ್ಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
0
samarasasudhi
ಜುಲೈ 20, 2024
ನವದೆಹಲಿ: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಗೆ ಸಂಬಂಧಿಸಿದಂತೆ ಐಟಿ ಸಚಿವಾಲಯವು ಟೆಕ್ ದೈತ್ಯ ಮೈಕ್ರೋಸಾಫ್ಟ್‌ನೊಂದಿಗೆ ಸಂಪರ್ಕದಲ್ಲಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ತಾಂತ್ರಿಕ ಅಡಚಣೆಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲಾಗಿದೆ. ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು 'ಎಕ್ಸ್'ನಲ್ಲಿ ಮಾಹಿತಿ ನೀಡಿದ್ದಾರೆ.
ಮೈಕ್ರೋಸಾಫ್ಟ್‌ನ ಸೇವೆಗಳಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಭಾರತ, ಅಮೆರಿಕ ಸೇರಿದಂತೆ ಇತರೆ ದೇಶಗಳಲ್ಲಿ ತೀವ್ರ ಅಡಚಣೆ ಉಂಟಾಗಿದೆ. ವಿಮಾನ ನಿಲ್ದಾಣಗಳು, ವಿಮಾನ ಸೇವೆಗಳು, ಷೇರುಪೇಟೆ ಸೇರಿದಂತೆ ಎಲ್ಲಾ ರೀತಿಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.