ಬದಿಯಡ್ಕ : ಪೆರಡಾಲ ನವಜೀವನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕ್ಲಬ್ ಗಳ ಉದ್ಘಾಟನೆ ಸೋಮವಾರ ನಡೆಯಿತು. ಹೈಯರ್ ಸೆಕೆಂಡರಿ ವಿಭಾಗದ ವಿಜ್ಞಾನ ಅಧ್ಯಾಪಕ ರಾಜೀವನ್ ಉದ್ಘಾಟಿಸಿ ಮಾತನಾಡಿ, ವಿವಿಧ ಕ್ಲಬ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಸೂಕ್ತ ಪ್ರತಿಭೆಯನ್ನು ಗುರುತಿಸಲು ಸಾಧ್ಯ. ಈ ಶಾಲೆಯ ಅದೆಷ್ಟೋ ವಿದ್ಯಾರ್ಥಿಗಳು ದೊಡ್ಡ ವಿಜ್ಞಾನಿಗಳಾಗಿ ಇಸ್ರೋ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದು ನಮಗೆ ಹೆಮ್ಮೆಯ ವಿಷಯ ಎಂದರು. ನಂತರ ವಿಜ್ಞಾನದ ವಿವಿಧ ಪ್ರಯೋಗಗಳನ್ನು ನಡೆಸಿಕೊಟ್ಟರು.
ಮುಖ್ಯೋಪಾಧ್ಯಾಯಿನಿ ಮಿನಿ ಸಭೆಯ ಅಧ್ಯಕ್ಷತೆ ವಹಿಸಿದರು. ಅಧ್ಯಾಪಕಿಯರಾದ ಜ್ಯೋತ್ಸ್ನಾ ಟೀಚರ್, ವಿದ್ಯಾ ಟೀಚರ್ ಕ್ಲಬ್ಬಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಹಿರಿಯ ಅಧ್ಯಾಪಕಿ ಪ್ರಭಾವತಿ ಕೆದಿಲಾಯ ಸ್ವಾಗತಿಸಿ, ನಿರಂಜನ ರೈ ಪೆರಡಾಲ ವಂದಿಸಿದರು. ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ರಾಜೇಶ್ ಮಾಸ್ತರ್ ಅಗಲ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

.jpg)
