HEALTH TIPS

ಕಾಸರಗೋಡಿನಲ್ಲಿ ಮುಂದುವರಿದ ಬಿರುಸಿನ ಮಳೆ-ಇಂದು ರೆಡ್ ಅಲರ್ಟ್

               ಕಾಸರಗೋಡು: ಜಿಲ್ಲೆಯಲ್ಲಿ ಬಿರುಸಿನ ಮಳೆ ಮುಂದುವರಿದಿದ್ದು, ಹೊಳೆಗಳು ಮತ್ತೆ ತುಂಬಿ ಹರಿಯಲಾರಂಭಿಸಿದೆ. ಕಳೆದ ನಾಲ್ಕು ದಿವಗಳಿಂದ ನಿರಂತರ ಮಳೆಯಾಗುತ್ತಿದೆ. ಈ ಮಧ್ಯೆ ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿವಸಗಳ ಕಾಲ ಬಿರುಸಿನ ಮಳೆಯಾಗುವ ಬಗ್ಗೆ ಕೇಂದ್ರ ಹವಮಾಣ ಇಲಾಖೆ ಸೂಚನೆ ನೀಡಿದೆ.

             ಕಾಸರಗೋಡು, ಕಣ್ಣೂರು ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಜುಲೈ 15ರಂದು ರೆಡ್ ಅಲರ್ಟ್‍ಘೋಷಿಸಲಾಗಿದೆ. ಕೇರಳದ ಕರಾವಳಿಯಿಂದ ತೊಡಗಿ ಗುಜರಾತ್ ವರೆಗೆ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬಿರುಸಿನ ಮಳೆಯಾಗುತ್ತಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಬಿರುಸಿನ ಮಳೆಯಾಗಲಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿನ ಜನತೆ, ಮೀನುಗರರು ಹಾಗೂ ಸಮುದ್ರ ಕರಾವಳಿಗೆ ತೆರಳುವ ಪ್ರವಾಸಿಗರು ಜಾಗ್ರತೆ ಪಾಲಿಸುವಂತೆ ಸೂಚಿಸಲಾಗಿದೆ. 

           ವ್ಯಾಪಕ ಮಳೆಗೆ ಬಂದ್ಯೋಡು ಕೊಕ್ಕೆಚ್ಚಾಲ್ ಬಳಿ ರಸ್ತೆಗೆ ಮರ ಕುಸಿದು ಬಿದ್ದು, ಅಲ್ಪ ಕಲ ವಾಹನ ಸಂಚಾರಕ್ಕೆ ಅಡಚಣೆಯುಂಟಗಿತ್ತು. ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries