ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಭಾರಿ ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
0
samarasasudhi
ಜುಲೈ 16, 2024
ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಭಾರಿ ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಮಂಗಳವಾರ ಮುಂಜಾನೆ ತೀವ್ರವಾಗಿ ಗಾಯಗೊಂಡಿದ್ದ ನಾಲ್ವರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸೋಮವಾರ ಸಂಜೆ ದೋಡಾ ಪಟ್ಟಣದಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ದೇಸಾ ಅರಣ್ಯ ವಲಯದ ಧಾರಿ ಗೋಟೆ ಉರರ್‌ಭಗಿಯಲ್ಲಿ ರಾಷ್ಟ್ರೀಯ ರೈಫಲ್ಸ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತಂಡ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿತ್ತು.
ಗುಂಡಿನ ಕಾಳಗದ ವೇಳೆ ಉಗ್ರರು ತಪ್ಪಿಸಿಕೊಳ್ಳಲು ಯತ್ನಿಸಿದರು. ಅತ್ಯಂತ ಕಠಿಣವಾದ ಭೂಪ್ರದೇಶದಲ್ಲೂ ಯೋಧರು ಎನ್‌ಕೌಂಟರ್ ಮುಂದುವರಿಸಿದರು.
ಎನ್‌ಕೌಂಟರ್‌ನಲ್ಲಿ ಸೇನೆಯ ಅಧಿಕಾರಿ ಸೇರಿದಂತೆ ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.