ಅಗರ್ತಲಾ: ಸೂಕ್ತ ದಾಖಲೆಗಳಿಲ್ಲದೇ ಭಾರತ ಪ್ರವೇಶಿಸಿದ ಕಾರಣಕ್ಕೆ ಏಳು ಮಂದಿ ಬಾಂಗ್ಲಾದೇಶೀಯರನ್ನು ತ್ರಿಪುರಾದ ಅಗರ್ತಲಾದ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
0
samarasasudhi
ಜುಲೈ 13, 2024
ಅಗರ್ತಲಾ: ಸೂಕ್ತ ದಾಖಲೆಗಳಿಲ್ಲದೇ ಭಾರತ ಪ್ರವೇಶಿಸಿದ ಕಾರಣಕ್ಕೆ ಏಳು ಮಂದಿ ಬಾಂಗ್ಲಾದೇಶೀಯರನ್ನು ತ್ರಿಪುರಾದ ಅಗರ್ತಲಾದ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮಾಹಿತಿ ಆಧರಿಸಿ, ರೈಲ್ವೆ ನಿಲ್ದಾಣದಲ್ಲಿ ಗುರುವಾರ ವಿಚಕ್ಷಣೆಯನ್ನು ತೀವ್ರಗೊಳಿಸಲಾಯಿತು.
ಬಂಧಿತರಲ್ಲಿ ಮೂವರು ಪುರುಷರು ಮತ್ತು ನಾಲ್ವರು ಮಹಿಳೆಯರಿದ್ದಾರೆ. ಅವರು ಕೋಲ್ಕತ್ತ, ಬೆಂಗಳೂರು ಮತ್ತು ದೆಹಲಿಗೆ ಪ್ರಯಾಣ ಬೆಳೆಸುವ ಯೋಜನೆ ಹೊಂದಿದ್ದರು ಎಂದು ಅವರು ಹೇಳಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ಸುಮಾರು 100 ಬಾಂಗ್ಲಾದೇಶೀಯರನ್ನು ಅಗರ್ತಲಾ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇದು ಕಾನೂನು ಜಾರಿ ಸಂಸ್ಥೆಗಳಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.