ನವದೆಹಲಿ: ಕೋಚಿಂಗ್ ಸೆಂಟರ್‌ನ ನೆಲಮಹಡಿಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ನೆಲಮಹಡಿಯ ಮಾಲೀಕ ಹಾಗೂ ಇತರ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
0
samarasasudhi
ಜುಲೈ 29, 2024
ನವದೆಹಲಿ: ಕೋಚಿಂಗ್ ಸೆಂಟರ್‌ನ ನೆಲಮಹಡಿಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ನೆಲಮಹಡಿಯ ಮಾಲೀಕ ಹಾಗೂ ಇತರ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ಆಯುಕ್ತ (ಕೇಂದ್ರ) ಎಂ. ಹರ್ಷ ವರ್ಧನ್, ಕಟ್ಟಡಲ್ಲಿರುವ ಪ್ರತಿ ಮಹಡಿಗೂ ಬೇರೆ ಬೇರೆ ಮಾಲೀಕರಿದ್ದಾರೆ ಎಂದಿದ್ದಾರೆ.
'ರಾಜೇಂದ್ರ ನಗರದಲ್ಲಿ ವರದಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಐದು ಮಂದಿಯನ್ನು ಬಂಧಿಸಲಾಗಿದೆ. ಕಟ್ಟಡದ ನೆಲಮಹಡಿಯ ಮಾಲೀಕ ಹಾಗೂ ಕಟ್ಟಡದ ಗೇಟ್‌ಗೆ ಹಾನಿಯಾಗುವಂತೆ ವಾಹನ ಚಾಲನೆ ಮಾಡಿ, ನೆಲ ಮಹಡಿಗೆ ನೀರು ನುಗ್ಗಲು ಕಾರಣವಾದ ವ್ಯಕ್ತಿಯೂ ಬಂಧಿತರ ಪಟ್ಟಿಯಲ್ಲಿದ್ದಾರೆ' ಎಂದು ತಿಳಿಸಿದ್ದಾರೆ.
ದುರಂತಕ್ಕೆ ಕಾರಣವಾದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಭರವಸೆ ನೀಡಿದ್ದಾರೆ.