ನವದೆಹಲಿ: 'ಹಿಂಸಾಚಾರ ಪೀಡಿತ ಮಣಿಪುರ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಬಹುತೇಕ ಭಾಗಗಳಲ್ಲಿ ಶಾಲೆಗಳು ಪುನಾರಂಭಗೊಂಡಿವೆ. ರಾಜ್ಯದಲ್ಲಿ ಶಾಂತಿ ಮರುಕಳುಹಿಸುವಂತೆ ಮಾಡಲು ಎಲ್ಲ ರೀತಿಯಲ್ಲಿ ಪ್ರಯತ್ನಿಸಲಾಗುತ್ತಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
0
samarasasudhi
ಜುಲೈ 03, 2024
ನವದೆಹಲಿ: 'ಹಿಂಸಾಚಾರ ಪೀಡಿತ ಮಣಿಪುರ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಬಹುತೇಕ ಭಾಗಗಳಲ್ಲಿ ಶಾಲೆಗಳು ಪುನಾರಂಭಗೊಂಡಿವೆ. ರಾಜ್ಯದಲ್ಲಿ ಶಾಂತಿ ಮರುಕಳುಹಿಸುವಂತೆ ಮಾಡಲು ಎಲ್ಲ ರೀತಿಯಲ್ಲಿ ಪ್ರಯತ್ನಿಸಲಾಗುತ್ತಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಮಾತನಾಡಿದ ಮೋದಿ, 'ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ' ಎಂದರು.
'ಹಿಂಸಾಚಾರ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ 500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು 11,000 ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ' ಎಂದು ಇದೇ ವೇಳೆ ಮಾಹಿತಿ ನೀಡಿದರು.
'ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಎರಡು ತಂಡಗಳನ್ನು ರಾಜ್ಯಕ್ಕೆ ಕಳುಹಿಸಿದೆ' ಎಂದು ತಿಳಿಸಿದರು.