ಕಾಸರಗೋಡು: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆಯ ಯಶಸ್ವಿಗಾಗಿ ಕಾಸರಗೋಡು ಪ್ರಾದೇಶಿಕ ಸಮಿತಿ ಸಭೆ ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದಲ್ಲಿ ನಡೆಯಿತು.
ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅಧ್ಯಕ್ಷತೆ ವಹಿಸಿದ್ದರು. ಚಾತುರ್ಮಾಸ್ಯ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಚಾತುರ್ಮಾಸ್ಯದ ಸಂದರ್ಭ ನಡೆಯಲಿರುವ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಚಾತುರ್ಮಾಸ್ಯ ಕರ್ಯಕ್ರಮದ ಯಶಸ್ವಿಗಾಗಿ ಪ್ರಾದೇಶಿಕ ಸಮಿತಿ ರಚಿಸಲಾಯಿತು. ರಕ್ಷಾಧಿಕಾರಿಯಾಗಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ, ಗೌರವಾಧ್ಯಕ್ಷರಾಗಿ ರಾಮ್ ಪ್ರಸಾದ್, ಅಧ್ಯಕ್ಷರಾಗಿ ಕೆ.ಎನ್. ವೆಂಕಟ್ರಮಣ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಕೂಡ್ಲು, ಕೋಶಾಧಿಕಾರಿಯಾಗಿ ಗುರುಪ್ರಸಾದ್ ಕೋಟೆಕಣಿ ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಆಗಸ್ಟ್ 25 ರಂದು ಪ್ರಾದೇಶಿಕ ಸಮಿತಿ ವತಿಯಿಂದ ಹೊರೆಕಾಣಿಕೆ ಸಮರ್ಪಿಸಲು ತೀರ್ಮಾನಿಸಲಾಯಿತು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರು ಶುಭನುಡಿಗಳನ್ನಾಡಿದರು. ಕೆ.ಎನ್. ವೆಂಕಟ್ರಮಣ ಹೊಳ್ಳ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಮ್ ಪ್ರಸಾದ್ ಸ್ವಾಗತಿಸಿದರು. ಗುರುಪ್ರಸಾದ್ ಕೋಟೆಕಣಿ ವಂದಿಸಿದರು.


