HEALTH TIPS

ಜಮ್ಮು: ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಕೊಂದು ಹಾಕಿದ ಸೇನೆ

                ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿ‌ಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸೇನಾ ಪಡೆಗಳು ಗುರುವಾರ ಕೊಂದು ಹಾಕಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

            ಉತ್ತರ ಕಾಶ್ಮೀರ ಜಿಲ್ಲೆಯ ಕೀರನ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯ ಕಣಿವೆಯಲ್ಲಿ ಉಗ್ರರು ಒಳನುಸುಳುವ ಯತ್ನ ಮಾಡುತ್ತಿದ್ದಾರೆ ಎನ್ನುವ ಗುಪ್ತಚರ ಮಾಹಿತಿಯನ್ವಯ ಸೇನಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

                 ಉಗ್ರರ ಚಲನವಲನಗಳನ್ನು ಗಮನಿಸಿದ ಭದ್ರತಾ ಪಡೆಗಳು, ಅವರ ಮೇಲೆ ಗುಂಡಿನ ದಾಳಿ ನಡೆಸಿವೆ. ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾರ್ಯಾಚರಣೆ ಪ್ರಗತಿಯಲ್ಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries