ಮಾಸ್ಕೋ: ರಷ್ಯಾ ಸೈನ್ಯಕ್ಕೆ ಸಹಾಯಕ ಸಿಬ್ಬಂದಿಯಾಗಿ ಭಾರತೀಯರ ನೇಮಕಾತಿಯನ್ನು ಕೊನೆಗೊಳಿಸುವ ಮತ್ತು ಈಗಾಗಲೇ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಬಿಡುಗಡೆಗೊಳಿಸುವ ಭಾರತದ ಮನವಿಗೆ ರಷ್ಯಾ ಸಕರಾತ್ಮಕವಾಗಿ ಸ್ಪಂದಿಸಿದೆ ಎಂದು ಉನ್ನತ ಮೂಲಗಳು ಮಂಗಳವಾರ ತಿಳಿಸಿವೆ.
0
samarasasudhi
ಜುಲೈ 09, 2024
ಮಾಸ್ಕೋ: ರಷ್ಯಾ ಸೈನ್ಯಕ್ಕೆ ಸಹಾಯಕ ಸಿಬ್ಬಂದಿಯಾಗಿ ಭಾರತೀಯರ ನೇಮಕಾತಿಯನ್ನು ಕೊನೆಗೊಳಿಸುವ ಮತ್ತು ಈಗಾಗಲೇ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಬಿಡುಗಡೆಗೊಳಿಸುವ ಭಾರತದ ಮನವಿಗೆ ರಷ್ಯಾ ಸಕರಾತ್ಮಕವಾಗಿ ಸ್ಪಂದಿಸಿದೆ ಎಂದು ಉನ್ನತ ಮೂಲಗಳು ಮಂಗಳವಾರ ತಿಳಿಸಿವೆ.
ಸೋಮವಾರ ರಾತ್ರಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಅನೌಪಚಾರಿಕ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ.
ಭಾರತದ ಮನವಿಗೆ ರಷ್ಯಾ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ರಷ್ಯಾ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದರು. ಇದಾದ ಬಳಿಕ ಎಚ್ಚೆತ್ತುಕೊಂಡ ಭಾರತೀಯ ವಿದೇಶಾಂಗ ಇಲಾಖೆ, ಸೈನ್ಯಕ್ಕೆ ಭಾರತೀಯರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಹೇಳಿತ್ತು. ಅಲ್ಲದೇ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ರಷ್ಯಾಕ್ಕೆ ಒತ್ತಾಯಿಸಿತ್ತು.
ಸುಮಾರು 200 ಭಾರತೀಯರು ರಷ್ಯಾ ಸೇನೆಯಲ್ಲಿ ಭದ್ರತಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ನಾಲ್ವರು ಭಾರತೀಯರು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹುತಾತ್ಮರಾಗಿದ್ದಾರೆ. ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 10 ಮಂದಿ ಈಗಾಗಲೇ ಭಾರತಕ್ಕೆ ಮರಳಿದ್ದಾರೆ.