ಕಠ್ಮಂಡು: ನೇಪಾಳದಲ್ಲಿ ಆಡಳಿತಾರೂಢ ಸರ್ಕಾರದ ಪಾಲುದಾರ ಪಕ್ಷಗಳಾದ ಸಿಪಿಎನ್-ಯುಎಂಎಲ್ ತಮ್ಮ ಬೆಂಬಲವನ್ನು ವಾಪಸ್ ಪಡೆದ ಬೆನ್ನಲ್ಲೇ, ಪ್ರಧಾನಿ ಪುಷ್ಪ ಕಮಲ್ ದಹಲ್ 'ಪ್ರಚಂಡ' ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ದೆವುಬಾ ಆಗ್ರಹಿಸಿದ್ದಾರೆ.
0
samarasasudhi
ಜುಲೈ 04, 2024
ಕಠ್ಮಂಡು: ನೇಪಾಳದಲ್ಲಿ ಆಡಳಿತಾರೂಢ ಸರ್ಕಾರದ ಪಾಲುದಾರ ಪಕ್ಷಗಳಾದ ಸಿಪಿಎನ್-ಯುಎಂಎಲ್ ತಮ್ಮ ಬೆಂಬಲವನ್ನು ವಾಪಸ್ ಪಡೆದ ಬೆನ್ನಲ್ಲೇ, ಪ್ರಧಾನಿ ಪುಷ್ಪ ಕಮಲ್ ದಹಲ್ 'ಪ್ರಚಂಡ' ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ದೆವುಬಾ ಆಗ್ರಹಿಸಿದ್ದಾರೆ.
ತಮ್ಮ ನಿವಾಸದಲ್ಲಿ ಪಕ್ಷದ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅತಿ ದೊಡ್ಡ ಪಕ್ಷಗಳಾಗಿರುವ ಎನ್‌ಸಿ ಮತ್ತು ಯುಎಂಎಲ್ ಸರ್ಕಾರ ರಚನೆಗೆ ಸಿದ್ಧವಾಗಿದ್ದು, ಪ್ರಧಾನಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು' ಎಂದು ಹೇಳಿದರು.
ಮಾಜಿ ಪ್ರಧಾನಿ ದೆವುಬಾ ಮತ್ತು ಕಮ್ಯುನಿಷ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾರ್ಕ್ಸಿಸ್ಟ್ ಲೆನಿನಿಸ್ಟ್ (ಸಿಪಿಎನ್-ಯುಎಂಎಲ್) ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಕೆ.ಪಿ. ಶರ್ಮ ಒಲಿ ಅವರು ಮೈತ್ರಿಸರ್ಕಾರ ರಚನೆಗೆ ತೀರ್ಮಾನಿಸಿದ್ದಾರೆ.
89 ಸ್ಥಾನಗಳನ್ನು ಹೊಂದಿರುವ ನೇಪಾಳಿ ಕಾಂಗ್ರೆಸ್ ಸಂಸತ್ತಿನಲ್ಲಿ ಅತಿ ದೊಡ್ಡ ಪಕ್ಷವಾಗಿದೆ. ಸಿಪಿಎನ್-ಯುಎಂಎಲ್ 78 ಸ್ಥಾನಗಳನ್ನು ಹೊಂದಿದೆ. ಎರಡು ಪಕ್ಷಗಳ ಒಟ್ಟು ಸ್ಥಾನ 167 ಆಗಲಿದ್ದು, ಸರ್ಕಾರ ರಚನೆಗೆ ಅವಕಾಶ ಸಿಗುತ್ತದೆ. 275 ಸ್ಥಾನಗಳನ್ನು ಹೊಂದಿರುವ ನೇಪಾಳ ಸಂಸತ್ತಿನಲ್ಲಿ ಸರ್ಕಾರ ರಚನೆಗೆ 138 ಸಂಸದರ ಬೆಂಬಲ ಅಗತ್ಯವಾಗಿದೆ.