ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಮೂವರು ಸೇರಿದಂತೆ ದೇಶದ ಹೈಕೋರ್ಟ್‌ಗಳಲ್ಲಿ ಒಟ್ಟು 109 ಮಹಿಳಾ ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಗುರುವಾರ ರಾಜ್ಯಸಭೆಗೆ ತಿಳಿಸಿದೆ.
0
samarasasudhi
ಆಗಸ್ಟ್ 02, 2024
ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಮೂವರು ಸೇರಿದಂತೆ ದೇಶದ ಹೈಕೋರ್ಟ್‌ಗಳಲ್ಲಿ ಒಟ್ಟು 109 ಮಹಿಳಾ ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರವು ಗುರುವಾರ ರಾಜ್ಯಸಭೆಗೆ ತಿಳಿಸಿದೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ' ಸುಪ್ರೀಂ ಕೋರ್ಟ್‌ನಲ್ಲಿ ಮೂವರು ಮಹಿಳೆಯರು ಮತ್ತು ವಿವಿಧ ಹೈಕೋರ್ಟ್‌ಗಳಲ್ಲಿ 106 ಮಹಿಳಾ ನ್ಯಾಯಮೂರ್ತಿಗಳಿದ್ದಾರೆ' ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ಮತ್ತು ದೇಶದ 25 ಹೈಕೋರ್ಟ್‌ಗಳಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಯಾವುದೇ ಜಾತಿ ಅಥವಾ ವರ್ಗದ ಜನರಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನ ಅವಕಾಶ ಕಲ್ಪಿಸುವುದಿಲ್ಲ ಎಂದೂ ಅವರು ತಿಳಿಸಿದರು.
'2018ರಿಂದ 2024ರ ಜುಲೈ 25ರವರೆಗೆ ದೇಶದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಲ್ಲಿರುವ ಒಟ್ಟು 661 ನ್ಯಾಯಮೂರ್ತಿಗಳ ಪೈಕಿ 21 ನ್ಯಾಯಮೂರ್ತಿಗಳು ಪರಿಶಿಷ್ಟ ಜಾತಿ, 12 ಮಂದಿ ಪರಿಶಿಷ್ಟ ಪಂಗಡ ಮತ್ತು 78 ನ್ಯಾಯಮೂರ್ತಿಗಳು ಇತರೆ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದವರು ಎಂದು ದಾಖಲೆಗಳು ಹೇಳುತ್ತವೆ' ಎಂಬುದಾಗಿ ಮಾಹಿತಿ ನೀಡಿದ್ದಾರೆ.