ನವದೆಹಲಿ: ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು 'ಲ್ಯಾಟರಲ್ ಎಂಟ್ರಿ' ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಿಡಿಕಾರಿದ್ದಾರೆ.
0
samarasasudhi
ಆಗಸ್ಟ್ 19, 2024
ನವದೆಹಲಿ: ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು 'ಲ್ಯಾಟರಲ್ ಎಂಟ್ರಿ' ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಿಡಿಕಾರಿದ್ದಾರೆ.
ಆಡಳಿತ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಲು ಪ್ರಧಾನಿ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಖಾಸಗಿ ಕ್ಷೇತ್ರದ 45 ಪರಿಣತರು ಶೀಘ್ರದಲ್ಲೇ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಹುದ್ದೆಗಳಿಗೆ ಸೇರಲಿದ್ದಾರೆ.
45 ಹುದ್ದೆಗಳಿಗೆ ನೇಮಕಾತಿ ಸಂಬಂಧ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಈಚೆಗೆ ಜಾಹೀರಾತು ಪ್ರಕಟಿಸಿದೆ. 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು/ಉಪಕಾರ್ಯದರ್ಶಿ ಹುದ್ದೆಗಳನ್ನು ಪರಿಣತರ ಮೂಲಕ ನೇಮಕಾತಿ ಮಾಡಲಾಗುತ್ತದೆ.
ಸಾಮಾನ್ಯವಾಗಿ ಈ ಹುದ್ದೆಗಳಿಗೆ ಅಖಿಲ ಭಾರತ ಸೇವೆಗಳ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಹಾಗೂ ಮತ್ತು ಇತರ 'ಎ'ದರ್ಜೆ ಸೇವೆಗಳ ಅಧಿಕಾರಿಗಳು ಇಂತಹ ಪ್ರಮುಖ ಹುದ್ದೆಗಳನ್ನು ನಿಭಾಯಿಸಲಿದ್ದಾರೆ.
ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು 'ಲ್ಯಾಟರಲ್ ಎಂಟ್ರಿ' ಮೂಲಕ ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದದ ನಡೆಯನ್ನು ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಿಎಸ್‌ಪಿ ಖಂಡಿಸಿವೆ.