ಟೋಕಿಯೊ: ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ (ಎಲ್‌ಡಿಪಿ) ಅಧ್ಯಕ್ಷರಾಗಿ ಮರು ಆಯ್ಕೆ ಬಯಸದಿರಲು ನಿರ್ಧರಿಸಿರುವುದಾಗಿ ಜಪಾನ್ ಪ್ರಧಾನಿ ಪುಮಿಯೊ ಕಿಶಿದಾ ಬುಧವಾರ ತಿಳಿಸಿದ್ದಾರೆ.
0
samarasasudhi
ಆಗಸ್ಟ್ 15, 2024
ಟೋಕಿಯೊ: ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ (ಎಲ್‌ಡಿಪಿ) ಅಧ್ಯಕ್ಷರಾಗಿ ಮರು ಆಯ್ಕೆ ಬಯಸದಿರಲು ನಿರ್ಧರಿಸಿರುವುದಾಗಿ ಜಪಾನ್ ಪ್ರಧಾನಿ ಪುಮಿಯೊ ಕಿಶಿದಾ ಬುಧವಾರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಹೊಸಬರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ' ಎಂದು ಹೇಳಿದ್ದಾರೆ.
ನನ್ನ ಅಧಿಕಾರಾವಧಿ ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳಲಿದ್ದು, ಅಲ್ಲಿಯವರೆಗೆ ದೇಶದ ಅಭಿವೃದ್ಧಿಗೆ ಪೂರಕವಾಗಿ ಮಾಡಬಹುದಾದ ಎಲ್ಲ ಕೆಲಸಗಳನ್ನು ಮಾಡುತ್ತೇನೆ ಎಂದಿದ್ದಾರೆ.
ಪುಮಿಯೊ ಕಿಶಿದಾ ನೇತೃತ್ವದ ಸರ್ಕಾರ ಬೆಲೆ ಏರಿಕೆ ಸೇರಿದಂತೆ ಹಲವು ಹಗರಣಗಳ ಆರೋಪವನ್ನು ಎದುರಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸದ್ಯ ಜಪಾನ್ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆ ಹೊಂದಿದ ರಾಷ್ಟ್ರವಾಗಿದೆ. 2022ರ ಜುಲೈನಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಹತ್ಯೆಯ ಬಳಿಕ ಪುಮಿಯೊ ಕಿಶಿದಾ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.