ಲಖನೌ: ಉತ್ತರ ಪ್ರದೇಶದಲ್ಲಿ ಇಂದು (ಶನಿವಾರ) ಮುಂಜಾನೆ ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ 22 ಬೋಗಿಗಳು ಹಳಿತಪ್ಪಿವೆ. ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣದ ನಡುವಿನ ಬ್ಲಾಕ್ ವಿಭಾಗದಲ್ಲಿ ಘಟನೆ ಸಂಭವಿಸಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
0
samarasasudhi
ಆಗಸ್ಟ್ 17, 2024
ಲಖನೌ: ಉತ್ತರ ಪ್ರದೇಶದಲ್ಲಿ ಇಂದು (ಶನಿವಾರ) ಮುಂಜಾನೆ ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ 22 ಬೋಗಿಗಳು ಹಳಿತಪ್ಪಿವೆ. ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣದ ನಡುವಿನ ಬ್ಲಾಕ್ ವಿಭಾಗದಲ್ಲಿ ಘಟನೆ ಸಂಭವಿಸಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಘಟನೆಯಲ್ಲಿ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.
ಕಲ್ಲು ಬಂಡೆಯೊಂದು ರೈಲಿನ ಎಂಜಿನ್‌ಗೆ ಬಡಿಯಿತು. ಇದರಿಂದಾಗಿ ಎಂಜಿನ್‌ಗೆ ಹೆಚ್ಚು ಹಾನಿಯಾಗಿದೆ ಎಂದು ಚಾಲಕ ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ತುರ್ತು ಸಹಾಯವಾಣಿಯನ್ನು ಆರಂಭಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.