ಕೋಲ್ಕತ್ತ: 'ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಆಗಬೇಕು' ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
0
samarasasudhi
ಆಗಸ್ಟ್ 17, 2024
ಕೋಲ್ಕತ್ತ: 'ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಆಗಬೇಕು' ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, 'ಬಿಜೆಪಿಯನ್ನು ಎದುರಿಸಲು ಮಮತಾ ಅವರಿಗೆ ಇರುವಷ್ಟು ಧೈರ್ಯ ಬೇರೆ ಯಾವುದೇ ವಿರೋಧ ಪಕ್ಷಗಳಿಗೆ ಇಲ್ಲ' ಎಂದು ಹೇಳಿದ್ದಾರೆ.
ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಸರ್ಕಾರದ ಮೇಲೆ ತೀವ್ರ ಟೀಕೆಗಳು ಬರುತ್ತಿವೆ. ಈ ನಡುವೆ ಮಮತಾ ಅವರ ಕುರಿತು ಸುಬ್ರಮಣಿಯನ್ ಸ್ವಾಮಿ ಹೇಳಿಕೆ ನೀಡಿದ್ದಾರೆ.
ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಕೋಲ್ಕತ್ತದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ನೇತೃತ್ವದಲ್ಲಿ ಟಿಎಂಸಿ ಬೆಂಬಲಿಗರು ಶುಕ್ರವಾರ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದ್ದರು.