ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಥಾಯ್ಲೆಂಡ್ ಪ್ರಧಾನಿಯಾಗಿ ನೇಮಕಗೊಂಡಿರುವ ಪೀಟೊಂಗ್ಟಾರ್ನ್ ಶಿನವತ್ರಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
0
samarasasudhi
ಆಗಸ್ಟ್ 18, 2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಥಾಯ್ಲೆಂಡ್ ಪ್ರಧಾನಿಯಾಗಿ ನೇಮಕಗೊಂಡಿರುವ ಪೀಟೊಂಗ್ಟಾರ್ನ್ ಶಿನವತ್ರಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
37 ವರ್ಷದ ಪೀಟೊಂಗ್ಟಾರ್ನ್ ಶಿನವತ್ರಾ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. ಇವರ ತಂದೆ ತಕ್ಸಿನ್ ಶಿನವತ್ರಾ, ಅತ್ತೆ ಯಿಂಗ್ಲಿಕ್ ಶಿನವತ್ರಾ ಕೂಡ ಪ್ರಧಾನಿಯಾಗಿದ್ದರು.
ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಥೈಲ್ಯಾಂಡ್ ಪ್ರಧಾನಿ ಶ್ರೇತ್ತಾ ಥವಿಸಿನ್ ದೋಷಿ ಎಂದು ತೀರ್ಪಿತ್ತಿರುವ ಸಾಂವಿಧಾನಿಕ ನ್ಯಾಯಾಲಯ, ಅವರನ್ನು ಹುದ್ದೆಯಿಂದ ವಜಾಗೊಳಿಸಿತ್ತು.