ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ವರದಿಯಾಗಿರುವ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಎಫ್‌ಐಆರ್ ದಾಖಲಿಸಿದೆ.
0
samarasasudhi
ಆಗಸ್ಟ್ 25, 2024
ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ವರದಿಯಾಗಿರುವ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಎಫ್‌ಐಆರ್ ದಾಖಲಿಸಿದೆ.
31 ವರ್ಷದ ವಿದ್ಯಾರ್ಥಿನಿಯ ಶವ ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಆಗಸ್ಟ್ 9ರಂದು ಪತ್ತೆಯಾಗಿತ್ತು. ಪ್ರಕರಣ ವರದಿಯಾಗುತ್ತಿದ್ದಂತೆ ರಾಷ್ಟ್ರದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಸುಳ್ಳು ಪತ್ತೆ ಪರೀಕ್ಷೆ
ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್, ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಹಾಗೂ ಇತರ ನಾಲ್ವರು ವೈದ್ಯರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಕೋಲ್ಕತ್ತದ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.