HEALTH TIPS

ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

 ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶನಿವಾರ ಭಯೋತ್ಪಾದಕರ ವಿರುದ್ಧ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ನಾಗರಿಕರೂ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹಲಾನ್ ಗಗರ್‌ಮಂಡು ಅರಣ್ಯದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಪ್ಯಾರಾ ಕಮಾಂಡೋ, ಸ್ಥಳೀಯ ಪೊಲೀಸ್ ಹಾಗೂ ಸೇನಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಕೈಗೊಂಡಿತ್ತು.


'ಗುಂಡಿನ ಕಾಳಗದಲ್ಲಿ ಆರು ಮಂದಿ ಯೋಧರು ಹಾಗೂ ಇಬ್ಬರು ನಾಗರಿಕರು ಗಾಯಗೊಂಡರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಆದರೆ ಇಬ್ಬರು ಯೋಧರು ಹುತಾತ್ಮರಾದರು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಉಗ್ರರನ್ನು ಮಟ್ಟ ಹಾಕಲು ಕಾರ್ಯಾಚರಣೆ ಮುಂದುವರಿದಿದೆ.

ಅನಂತ್‌ನಾಗ್ ಎನ್‌ಕೌಂಟರ್

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries