ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ನೀಡಿದ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅವರ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
0
samarasasudhi
ಆಗಸ್ಟ್ 09, 2024
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ನೀಡಿದ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅವರ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮನು ಭಾಕರ್ ಸಹ ರಕ್ಷಣಾ ಸಚಿವರನ್ನು ಭೇಟಿಯಾದ ಫೋಟೊಗಳನ್ನು 'ಎಕ್ಸ್'ನಲ್ಲಿ ಹಂಚಿಕೊಂಡಿದ್ದು, ಬಿಡುವಿಲ್ಲದ ಸಮಯದ ನಡುವೆಯೂ ನಮ್ಮನ್ನು ಭೇಟಿ ಮಾಡಿ, ಸ್ಫೂರ್ತಿದಾಯಕ ಮಾತುಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದು ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.
ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎನ್ನುವ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.
22 ವರ್ಷದ ಭಾಕರ್, ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಹಾಗೂ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಶನಿವಾರ ಮತ್ತೆ ಪ್ಯಾರಿಸ್‌ಗೆ ತೆರಳಲಿರುವ ಭಾಕರ್, ಭಾನುವಾರ ನಡೆಯಲಿರುವ ಒಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯಾಗಿ ಪಾಲ್ಗೊಳ್ಳಲಿದ್ದಾರೆ.