HEALTH TIPS

ಮಹಾರಾಷ್ಟ್ರ |ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ: ತನಿಖೆಗೆ ಹೊಸ ಸಮಿತಿ ರಚನೆ

           ಮುಂಬೈ: ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದ ಹಿಂದಿನ ಕಾರಣಗಳನ್ನು ತನಿಖೆ ಮಾಡಲು ಎಂಜಿನಿಯರ್‌ಗಳು, ಐಐಟಿ ತಜ್ಞರು ಮತ್ತು ನೌಕಾಪಡೆಯ ಅಧಿಕಾರಿಗಳನ್ನು ಒಳಗೊಂಡ ತಾಂತ್ರಿಕ ಸಮಿತಿಯನ್ನು ಮಹಾರಾಷ್ಟ್ರ ಸರ್ಕಾರ ರಚಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

          'ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವಕ್ಕೆ ತಕ್ಕಂತೆ ಹೊಸ ಪ್ರತಿಮೆಯನ್ನು ನಿರ್ಮಿಸಲು ಸರ್ಕಾರ ಸಮಿತಿಯನ್ನು ರಚಿಸಿದೆ. ಪಕ್ಷದ ಸಚಿವರು, ಅಧಿಕಾರಿಗಳು ಮತ್ತು ನೌಕಾಪಡೆಯ ಅಧಿಕಾರಿಗಳೊಂದಿಗೆ ತಮ್ಮ ನಿವಾಸ 'ವರ್ಷ'ದಲ್ಲಿ ಸಭೆ ನಡೆಸಿದ ಬಳಿಕ ಸಿಎಂ ಏಕನಾಥ್‌ ಶಿಂಧೆ ಈ ನಿರ್ಧಾರ ಕೈಗೊಂಡಿದ್ದಾರೆ' ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.

             2023ರ ಡಿಸೆಂಬರ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ 35 ಅಡಿ ಎತ್ತರದ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ (ಆಗಸ್ಟ್‌ 26) ಕುಸಿದು ಬಿದ್ದಿತ್ತು. ಘಟನೆ ಸಂಬಂಧ, ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries