ನವದೆಹಲಿ: ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಸಮೀರ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
0
samarasasudhi
ಆಗಸ್ಟ್ 07, 2024
ನವದೆಹಲಿ: ಮಾಲೆಗಾಂವ್ ಸ್ಫೋಟ (2008) ಪ್ರಕರಣದ ಆರೋಪಿ ಸಮೀರ್ ಕುಲಕರ್ಣಿ ಅವರ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠವು, 'ಅರ್ಜಿಯನ್ನು ವಜಾಗೊಳಿಸಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡುವುದಿಲ್ಲ' ಎಂದು ಕುಲಕರ್ಣಿ ಅವರ ಪರ ವಕೀಲರಿಗೆ ತಿಳಿಸಿತು.
ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದಲ್ಲಿ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.