ಮುಂಬೈ: ಬಿಎಂಡಬ್ಲ್ಯು ಹಿಟ್ ಆಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಅವರು ತಮ್ಮನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ, ತಮ್ಮನ್ನು ತಕ್ಷಣವೇ ಬಂಧಮುಕ್ತಗೊಳಿಸಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
0
samarasasudhi
ಆಗಸ್ಟ್ 20, 2024
ಮುಂಬೈ: ಬಿಎಂಡಬ್ಲ್ಯು ಹಿಟ್ ಆಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಅವರು ತಮ್ಮನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ, ತಮ್ಮನ್ನು ತಕ್ಷಣವೇ ಬಂಧಮುಕ್ತಗೊಳಿಸಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
ಶಾ ಅವರು ಬಿಎಂಡಬ್ಲ್ಯು ಕಾರನ್ನು ಮುಂಬೈನ ವರ್ಲಿ ಪ್ರದೇಶದಲ್ಲಿ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು, ಅದರಲ್ಲಿ ಸಾಗುತ್ತಿದ್ದ ಕಾವೇರಿ ನಖ್ವಾ ಎನ್ನುವವರ ಸಾವಿಗೆ ಕಾರಣರಾದ ಆರೋಪ ಎದುರಿಸುತ್ತಿದ್ದಾರೆ.