ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
0
samarasasudhi
ಆಗಸ್ಟ್ 20, 2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಒಟ್ಟು 90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಸೆ.18ರಂದು 24 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ.
ಆಯೋಗ ಅಧಿಸೂಚನೆ ಹೊರಡಿಸಿದ ಹಿನ್ನೆಲೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಬಹುದು. ಆ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆ.28 ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಆ.30 ಕೊನೆಯ ದಿನವಾಗಿದೆ.
ಮೊದಲ ಹಂತದಲ್ಲಿ ದಕ್ಷಿಣ ಕಾಶ್ಮೀರದ ಕಣಿವೆಯ 16 ಮತ್ತು ಜಮ್ಮು ಪ್ರದೇಶದ 8 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
90 ಕ್ಷೇತ್ರಗಳಲ್ಲಿ 74 ಸಾಮಾನ್ಯ ಕ್ಷೇತ್ರಗಳು, 7 ಪರಿಶಿಷ್ಟ ಜಾತಿ ಹಾಗೂ 9 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲು.