HEALTH TIPS

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಬದ್ಲಾಪುರ ಉದ್ವಿಗ್ನ; SIT ರಚಿಸಿದ ಮಹಾ ಸರ್ಕಾರ

          ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಘಟನೆ ಖಂಡಿಸಿ ಬದ್ಲಾಪುರದಲ್ಲಿ ಆಕ್ರೋಶ ಭುಗಿಲೆದ್ದಿದೆ.

          ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ಮತ್ತು ಸ್ಥಳೀಯರು ಬದ್ಲಾಪುರ ರೈಲು ನಿಲ್ದಾಣದಲ್ಲಿ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

          ಪೊಲೀಸರಿಂದ ಪ್ರತಿಭಟನಾಕಾರರನ್ನು ಮನವೊಲಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ 4ರಿಂದ 5 ಗಂಟೆಗಳವರೆಗೆ ರೈಲು ಸಂಚಾರ ಸ್ಥಗಿತಗೊಂಡಿತ್ತು.

          ಈ ಎಲ್ಲಾ ಬೆಳವಣಿಗೆಗಳ ನಡುವೆ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದಾಗಿ ಮಹಾರಾಷ್ಟ್ರ ಸರ್ಕಾರ ಇಂದು (ಮಂಗಳವಾರ) ತಿಳಿಸಿದೆ.


             ಹಿರಿಯ ಪೊಲೀಸ್ ಅಧಿಕಾರಿ ಆರತಿ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ತಂಡವನ್ನು ರಚಿಸಲಾಗಿದೆ. ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಪ್ರಸ್ತಾವನೆ ಸಲ್ಲಿಸುವಂತೆ ಥಾಣೆ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

           ಮೂರು ಮತ್ತು ನಾಲ್ಕು ವರ್ಷ ವಯಸ್ಸಿನ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರನ್ನು ನಿಂದಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬದ್ಲಾಪುರದ ಶಾಲಾ ಸಿಬ್ಬಂದಿಯೊಬ್ಬರನ್ನು ಶನಿವಾರ ಪೊಲೀಸರು ಬಂಧಿಸಿದ್ದರು.

               ಘಟನೆ ಸಂಬಂಧ ಶಾಲಾ ಆಡಳಿತ ಮಂಡಳಿಯು ಪ್ರಾಂಶುಪಾಲರು, ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ನನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries