HEALTH TIPS

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 5 ಮಂದಿ ಸಾವು

         ಇಂಫಾಲ: ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಇಂದು (ಶನಿವಾರ) ನಡೆದ ಹಿಂಸಾಚಾರದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

           ಮತ್ತೊಂದೆಡೆ, ಬಿಷ್ಣುಪುರ ಜಿಲ್ಲೆಯಲ್ಲಿ ಉಗ್ರರು ನಡೆಸಿದ ರಾಕೆಟ್ ದಾಳಿಗೆ ಭದ್ರತಾ ಪಡೆಗಳು ತಿರುಗೇಟು ನೀಡಿದ್ದು, ಚುರ್‌ಚಂದಪುರ ಜಿಲ್ಲೆಯಲ್ಲಿ ಉಗ್ರರಿಗೆ ಸೇರಿದ 3 ಬಂಕರ್‌ಗಳನ್ನು ಸೇನಾಪಡೆಗಳು ಧ್ವಂಸಗೊಳಿಸಿವೆ.

          ಉಗ್ರರು ನಡೆಸಿದ ರಾಕೆಟ್‌ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

            ಜಿರಿಬಾಮ್‌ ಜಿಲ್ಲೆಯಲ್ಲಿ ಎರಡು ಸಮುದಾಯಗಳ ಜನರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿಯನ್ನು ನಿದ್ದೆಯಲ್ಲಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದ್ದು, ಇತರ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

            ಜಿಲ್ಲಾ ಕೇಂದ್ರದಿಂದ 5 ಕಿ.ಮೀ ದೂರದ ಪ್ರತ್ಯೇಕ ಸ್ಥಳದಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯ ಮನೆಗೆ ನುಗ್ಗಿದ ಉಗ್ರರು ವ್ಯಕ್ತಿ ನಿದ್ದೆಯಲ್ಲಿದ್ದಾಗ ಗುಂಡಿಟ್ಟು ಕೊಂದಿದ್ದಾರೆ ಎಂದು ಅವರು ಹೇಳಿದ್ದಾರೆ. ಉಗ್ರರು ದಾಳಿ ನಡೆಸಿದ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಸೇನಾಪಡೆಗಳನ್ನು ನಿಯೋಜಿಸಲಾಗಿದೆ. ಕೂಂಬಿಂಗ್ ಕಾರ್ಯಾಚರಣೆ ಪ್ರಗತಿಯಲ್ಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries