HEALTH TIPS

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಶೇ 60ಕ್ಕೂ ಹೆಚ್ಚು ಮತದಾನ

 ಕೊಲಂಬೊ: ಆರ್ಥಿಕ ಬಿಕಟ್ಟಿನಿಂದ ಸುಧಾರಿಸಿಕೊಳ್ಳುತ್ತಿರುವ ಶ್ರೀಲಂಕಾದಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಸಂಬಂಧ ಶನಿವಾರ ನಡೆದ ಚುನಾವಣೆಯಲ್ಲಿ ಶೇ 60ಕ್ಕೂ ಹೆಚ್ಚು ಮತದಾನವಾಗಿದ್ದು, ಎಣಿಕೆ ಕಾರ್ಯ ಆರಂಭವಾಗಿದೆ.

ಮತದಾನ ಪ್ರಕ್ರಿಯೆ ವೇಳೆ ಹಿಂಸಾಚಾರ ಸೇರಿದಂತೆ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

ಸುಮಾರು 1.7 ಕೋಟಿ ಜನರು ಮತ ಚಲಾಯಿಸಲು ಅರ್ಹತೆ ಹೊಂದಿದ್ದರು. ಒಟ್ಟು 13,400 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಚುನಾವಣೆ ನಡೆಸಲು 2 ಲಕ್ಷಕ್ಕೂ ಹೆಚ್ಚು ಅಧಿಕಾರಿಗಳನ್ನು ಮತ್ತು ಬಂದೋಬಸ್ತ್‌ಗಾಗಿ 63 ಸಾವಿರ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

1982ರ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಚುನಾವಣೆಯಲ್ಲಿ ತೀವ್ರ ಪೈಪೋಟಿ ಎದುರಾಗಿತ್ತಲ್ಲದೇ, 38 ಅಭ್ಯರ್ಥಿಗಳು ಕಣದಲ್ಲಿದ್ದರು.

ಬೌದ್ಧ ದೇವಾಲಯದ ಸಭಾಂಗಣಗಳು, ಶಾಲೆಗಳು ಮತ್ತು ಸಮುದಾಯ ಕೇಂದ್ರಗಳನ್ನೂ ಮತದಾನ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆಯವರೆಗೆ ನಡೆಯಿತು.

ದ್ವೀಪ ರಾಷ್ಟ್ರದಲ್ಲಿ 2022ರಲ್ಲಿ ನಡೆದ ಜನತಾ ದಂಗೆಯು ಗೋಟಬಯ ರಾಜಪಕ್ಷ ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿತ್ತು. ಅವರು ದೇಶಬಿಟ್ಟು ಪಲಾಯನ ಮಾಡಿದ ಬಳಿಕ 75 ವರ್ಷದ ರನಿಲ್‌ ವಿಕ್ರಮಸಿಂಘೆ ಅವರನ್ನು ಅಧ್ಯಕ್ಷರನ್ನಾಗಿ ಸಂಸತ್ತು ಆಯ್ಕೆ ಮಾಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries