ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
0
samarasasudhi
ಸೆಪ್ಟೆಂಬರ್ 22, 2024
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ಆರೋಪದಲ್ಲಿ ಅರವಿಂದ ಕೇಜ್ರಿವಾಲ್ ಅವರನ್ನು ಕೇಂದ್ರೀಯ ತನಿಖಾ ದಳವು (ಸಿಬಿಐ) ಬಂಧಿಸಿತ್ತು.
ಸದ್ಯ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ಅವರು, ಕಳೆದವಾರವಷ್ಟೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿ, ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಅವರ ಹೆಸರನ್ನು ಘೋಷಿಸಿದ್ದರು. ಈ ನಿರ್ಧಾರವನ್ನು ಪಕ್ಷವು ಸರ್ವಾನುಮತದಿಂದ ಅಂಗೀಕರಿಸಿತ್ತು.