ನವದೆಹಲಿ: ಪ್ರಕರಣವೊಂದರಲ್ಲಿ ಜೈಲುಪಾಲಾಗಿರುವ ಆರೋಪಿಯು ಬೇರೊಂದು ಅಪರಾಧ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
0
samarasasudhi
ಸೆಪ್ಟೆಂಬರ್ 09, 2024
ನವದೆಹಲಿ: ಪ್ರಕರಣವೊಂದರಲ್ಲಿ ಜೈಲುಪಾಲಾಗಿರುವ ಆರೋಪಿಯು ಬೇರೊಂದು ಅಪರಾಧ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
2023ರಲ್ಲಿ ಧನರಾಜ್ ಅಸ್ವಾನಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.
ಜೈಲಿನಲ್ಲಿರುವ ಆರೋಪಿಯು ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಅರ್ಹನೇ ಎಂಬುದರ ಕುರಿತು ನ್ಯಾಯಪೀಠ ವಿವರಣೆ ನೀಡಿದೆ.
ಯಾವುದೇ ಅಪರಾಧಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವುದಕ್ಕೂ ಮುನ್ನ ಆತ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹನಾಗಿರುತ್ತಾನೆ. ಒಂದು ವೇಳೆ ಆ ಪ್ರಕರಣದಲ್ಲಿ ಆತನನ್ನು ಬಂಧಿಸಿದರೆ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸುವುದು ಮಾತ್ರ ಅವಕಾಶವಿರುತ್ತದೆ ಎಂದು ಪರ್ದಿವಾಲಾ ತಿಳಿಸಿದ್ದಾರೆ.
ಈಗಾಗಲೇ ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ಆರೋಪಿಗೆ ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸೆಷನ್ಸ್ ಅಥವಾ ಹೈಕೋರ್ಟ್ ತಡೆ ನೀಡಲು ಅವಕಾಶವಿಲ್ಲ. ಒಂದು ವೇಳೆ ತಡೆ ನೀಡಿದರೆ ಅದು ಕಾನೂನಿಗೆ ವಿರುದ್ಧವಾದ ಕ್ರಮವಾಗಿರುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.