HEALTH TIPS

ಕೋಲ್ಕತ್ತ ಅತ್ಯಾಚಾರ | ಪೊಲೀಸರು ಲಂಚದ ಆಮಿಷ ಒಡ್ಡಿದ್ದರು: ಸಂತ್ರಸ್ತೆಯ ಪೋಷಕರು

 ಕೋಲ್ಕತ್ತ: ಕೋಲ್ಕತ್ತದ ಆರ್‌.ಜಿ ಕರ್ ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವೈದ್ಯಕೀಯ ವಿದ್ಯಾರ್ಥಿಯನ್ನು ತ್ವರಿತವಾಗಿ ಅಂತ್ಯಕ್ರಿಯೆ ಮಾಡುವ ಮೂಲಕ ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದರು ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.

ಆರ್‌.ಜಿ ಕರ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿ ಅವರು, ಘಟನೆ ಬೆಳಕಿಗೆ ಬಂದ ಬಳಿಕ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಲಂಚದ ಆಮಿಷ ಒಡ್ಡಿದ್ದರು ಎಂದು ಆರೋಪಿಸಿದ್ದಾರೆ.

'ಪೊಲೀಸರು ಆರಂಭದಿಂದಲೇ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದರು. ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುವಾಗಲೂ ಮೃತದೇಹವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ನಾವು ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ಮೃತದೇಹವನ್ನು ನಮಗೆ ಹಸ್ತಾಂತರಿಸುವಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಲಂಚದ ಆಮಿಷ ಒಡ್ಡಿದರು. ಆದರೆ ನಾವು ಅದನ್ನು ನಿರಾಕರಿಸಿದೆವು' ಎಂದು ವಿದ್ಯಾರ್ಥಿಯ ತಂದೆ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವಿಭಾಗದ ಟ್ರೇನಿ ವಿದ್ಯಾರ್ಥಿಗಳು ಬುಧವಾರ ರಾತ್ರಿ ನಡೆಸಿದ ಪ್ರತಿಭಟನೆಯಲ್ಲಿ ಸಂತ್ರಸ್ತೆಯ ಪೋಷಕರು ಪಾಲ್ಗೊಂಡಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries