ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅ.22ರಿಂದ 23ರವರೆಗೆ ರಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ.
0
samarasasudhi
ಅಕ್ಟೋಬರ್ 19, 2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅ.22ರಿಂದ 23ರವರೆಗೆ ರಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಕಜಾನ್‌ನಲ್ಲಿ ನಡೆಯಲಿರುವ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ರಷ್ಯಾ ಪ್ರವಾಸದ ವೇಳೆ ಮೋದಿ ಅವರು ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ನಾಯಕರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ವಿದೇಶಾಂಗ ಇಲಾಖೆಯ ಪ್ರಕಟಣೆ ತಿಳಿಸಿದೆ.
ಜಾಗತಿಕ ಅಭಿವೃದ್ಧಿ ಮತ್ತು ಸುರಕ್ಷತೆಗಾಗಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಬಲಪಡಿಸುವುದು ಈ ಬಾರಿಯ ಬ್ರಿಕ್ಸ್ ಶೃಂಗದ ಧ್ಯೇಯವಾಗಿದ್ದು, ಪ್ರಮುಖ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಇದು ವೇದಿಕೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.