ನವದೆಹಲಿ: ಪಿಂಚಣಿ ಯೋಜನೆಗೆ ಸಂಬಂಧಿಸಿದ ಎಲ್ಲ ರೀತಿಯ ಕುಂದುಕೊರತೆಗಳನ್ನು ಮೂರು ವಾರಗಳಲ್ಲಿ ಪರಿಹರಿಸುವಂತೆ ಕೇಂದ್ರ ಸರ್ಕಾರವು ಇಲಾಖೆಗಳಿಗೆ ಸೂಚನೆ ನೀಡಿದೆ.
0
samarasasudhi
ಅಕ್ಟೋಬರ್ 17, 2024
ನವದೆಹಲಿ: ಪಿಂಚಣಿ ಯೋಜನೆಗೆ ಸಂಬಂಧಿಸಿದ ಎಲ್ಲ ರೀತಿಯ ಕುಂದುಕೊರತೆಗಳನ್ನು ಮೂರು ವಾರಗಳಲ್ಲಿ ಪರಿಹರಿಸುವಂತೆ ಕೇಂದ್ರ ಸರ್ಕಾರವು ಇಲಾಖೆಗಳಿಗೆ ಸೂಚನೆ ನೀಡಿದೆ.
ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಸಚಿವಾಲಯವು ಈ ಬಗ್ಗೆ ಕೇಂದ್ರ ಸರ್ಕಾರದ ಎಲ್ಲ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿದೆ.
ಸಾರ್ವಜನಿಕ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕಾರ ಪಿಂಚಣಿಗೆ ಸಂಬಂಧಿಸಿದ ಕುಂದುಕೊರತೆ ಅರ್ಜಿಗಳನ್ನು 21 ದಿನಗಳಲ್ಲಿ ವಿಲೇವಾರಿ ಮಾಡಬೇಕು. ಒಂದೊಮ್ಮೆ ಹೆಚ್ಚಿನ ಕಾಲಾವಕಾಶ ಬೇಕಿದ್ದಲ್ಲಿ, ಮಧ್ಯಂತರ ಪರಿಹಾರವನ್ನಾದರೂ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಲಾಖೆ ಒದಗಿಸಿದ ಪರಿಹಾರದಿಂದ ಅರ್ಜಿದಾರರು ತೃಪ್ತರಾದಿದ್ದಲ್ಲಿ, ಅರ್ಜಿ ಇತ್ಯರ್ಥಗೊಂಡ 30 ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಬೇಕು. ಮೇಲ್ಮನವಿ ಪ್ರಾಧಿಕಾರವು 30 ದಿನಗಳ ಒಳಗೆ ಅರ್ಜಿದಾರರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ತಿಳಿಸಲಾಗಿದೆ.