ನವದೆಹಲಿ: ವೈಜಾಗ್ ಉಕ್ಕು ಕಾರ್ಖಾನೆಯ 4200 ಗುತ್ತಿಗೆ ಕಾರ್ಮಿಕರನ್ನು 48 ಗಂಟೆಗಳಲ್ಲಿ ಮರು ನೇಮಕ ಮಾಡಲಾಗಿದೆ ಎಂದು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ ಎಂದೂ ಆರೋಪಿಸಿದ್ದಾರೆ.
0
samarasasudhi
ಅಕ್ಟೋಬರ್ 04, 2024
ನವದೆಹಲಿ: ವೈಜಾಗ್ ಉಕ್ಕು ಕಾರ್ಖಾನೆಯ 4200 ಗುತ್ತಿಗೆ ಕಾರ್ಮಿಕರನ್ನು 48 ಗಂಟೆಗಳಲ್ಲಿ ಮರು ನೇಮಕ ಮಾಡಲಾಗಿದೆ ಎಂದು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ ಎಂದೂ ಆರೋಪಿಸಿದ್ದಾರೆ.
'ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರು ಉಕ್ಕು ಕಾರ್ಖಾನೆಯ ಬಗ್ಗೆ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ. ಅವರ ಹೇಳಿಕೆಯಲ್ಲಿ ಹುರುಳಿಲ್ಲ. ರಾಜಕೀಯ, ಮತಬ್ಯಾಂಕ್ ರಾಜಕಾರಣಕ್ಕಾಗಿ ಅವರು ಕಾರ್ಖಾನೆಯ ಕಾರ್ಮಿಕರು, ಸಾರ್ವಜನಿಕರ ಭಾವನೆಗಳ ಜತೆ ಆಡುತ್ತಿದ್ದಾರೆ' ಎಂದು ಕಿಡಿಕಾರಿದ್ದಾರೆ.
ಸೆಪ್ಟೆಂಬರ್ 27ರಂದು ಸೇವೆಯಿಂದ ತೆಗೆದು ಹಾಕಲ್ಪಟ್ಟ ಕಾರ್ಖಾನೆಯ 4,200 ಗುತ್ತಿಗೆ ಕಾರ್ಮಿಕರನ್ನು 48 ಗಂಟೆಗಳ ಒಳಗಾಗಿ ಮರು ನೇಮಕ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್ 29ಕ್ಕೆ ಎಲ್ಲ ನೌಕರರಿಗೂ ಮತ್ತೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.