ನವದೆಹಲಿ: ಲಡಾಖ್‌ನ ಅಂತರರಾಷ್ಟ್ರೀಯ ಗಡಿಯ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಲ್ಲಿ ಭಾರತ ಮತ್ತು ಚೀನಾದ ಸೇನೆಗಳ ಹಿಂತೆಗೆದುಕೊಳ್ಳುವ ಕಾರ್ಯ ಶೇಕಡ 80-90ರಷ್ಟು ಮುಗಿದಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.
0
samarasasudhi
ಅಕ್ಟೋಬರ್ 29, 2024
ನವದೆಹಲಿ: ಲಡಾಖ್‌ನ ಅಂತರರಾಷ್ಟ್ರೀಯ ಗಡಿಯ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಲ್ಲಿ ಭಾರತ ಮತ್ತು ಚೀನಾದ ಸೇನೆಗಳ ಹಿಂತೆಗೆದುಕೊಳ್ಳುವ ಕಾರ್ಯ ಶೇಕಡ 80-90ರಷ್ಟು ಮುಗಿದಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.
ಎಲ್ಲ ರೀತಿಯ ಮೂಲಸೌಕರ್ಯ ತೆರವು ಮತ್ತು ಸೇನಾಪಡೆಗಳ ಹಿಂತೆಗೆತವನ್ನು ಪ್ರಕ್ರಿಯೆ ಒಳಗೊಂಡಿದೆ.
ಸೇನಾಪಡೆಗಳ ಹಿಂತೆಗೆತ ಪ್ರಕ್ರಿಯೆ ಅಕ್ಟೋಬರ್ 29ಕ್ಕೆ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
'ಪೂರ್ವ ಲಡಾಖ್‌ನ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಲ್ಲಿ ನಿಯೋಜಿಸಿರುವ ತಮ್ಮ ಸೇನೆಗಳನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಮೊದಲ ಹೆಜ್ಜೆಯಾಗಿದ್ದು, ಗಸ್ತು ನಡೆಸುವ ಪ್ರಕ್ರಿಯೆಯು ಅಂತಿಮವಾಗಿ, 2020ರ ಏಪ್ರಿಲ್‌ಗಿಂತ ಮುನ್ನ ಇದ್ದ ಸ್ಥಿತಿಗೆ ಮರಳಲಿದೆ'ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾನುವಾರ ಹೇಳಿದ್ದರು.
'ನೆರೆ ರಾಷ್ಟ್ರದಿಂದಲೂ ಯಾವುದೇ ಸಮಸ್ಯೆಯಾಗದಿದ್ದರೆ, ಸಹಜ ಸ್ಥಿತಿ ನಿರ್ಮಾಣ ಮಾಡುವುದು ಭಾರತದ ಮುಂದಿನ ಹೆಜ್ಜೆಯಾಗಿದೆ'ಎಂದು ಹೇಳಿದ್ದರು.
ಪೂರ್ವ ಲಡಾಖ್‌ನ ಡೆಪ್ಸಾಂಗ್ ಮತ್ತು ಡೆಮ್‌ಚೋಕ್ ಪ್ರದೇಶಗಳಲ್ಲಿ ನಿಯೋಜಿಸಿರುವ ತಮ್ಮ ಸೇನೆಗಳನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಭಾರತ ಹಾಗೂ ಚೀನಾ ನಡೆಸುತ್ತಿದ್ದು, ಪೂರ್ವ ಲಡಾಖ್ ಬಳಿ ನಾಲ್ಕು ವರ್ಷಗಳಿಂದ ಮೂಡಿರುವ ಅನಿಶ್ಚಿತ ಪರಿಸ್ಥಿತಿ ಅಂತ್ಯಗೊಳಿಸುವಲ್ಲಿ ಇದೊಂದು ಪ್ರಮುಖ ಹೆಜ್ಜೆ ಎಂದು ವಿಶ್ಲೇಷಿಸಲಾಗಿದೆ.
ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು, ಸೇನಾಪಡೆ ಹಿಂತೆಗೆತ ಸೇರಿದಂತೆ ಗಡಿಯಲ್ಲಿ ಉದ್ವಿಗ್ನತೆ ಶಮನಕ್ಕೆ ಸಂಬಂಧಿಸಿದ ಒಪ್ಪಂದವನ್ನು ಅನುಮೋದಿಸಿದ್ದರು.
ಈ ಎರಡು ತಾಣಗಳಿಗೆ ಸಂಬಂಧಿಸಿದಂತೆ ಮಾತ್ರ ಈಗ ಒಪ್ಪಂದಕ್ಕೆ ಬರಲಾಗಿತ್ತು. ಇತರೆ ತಾಣಗಳಿಗೆ ಸಂಬಂಧಿಸಿದಂತೆ ಮಾತುಕತೆ ಇನ್ನೂ ಪ್ರಗತಿಯಲ್ಲಿದೆ ಎಂದು ಆ ಮೂಲಗಳು ತಿಳಿಸಿವೆ.